ಬೆಂಗಳೂರು, ಜೂ.16 (DaijiworldNews/MB) : ಕರ್ನಾಟಕದಲ್ಲಿ ದಿನಂಪ್ರತಿ 3,000 ಕೆ.ಜಿ.ಯಷ್ಟು ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ದಿನಂಪ್ರತಿ 3,000 ಕೆ.ಜಿ.ಯಷ್ಟು ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಮಾಸ್ಕ್, ಪಿಪಿಇ ಕಿಟ್, ಕೈ ಗವುಸುಗಳು ಇದರ ಮೂಲ. ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು ಅದು ಕ್ಲಿಷ್ಟಕರ ಕೂಡಾ, ಈ ತ್ಯಾಜ್ಯ ಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆಯನ್ನು ರೂಡಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಒಟ್ಟು 7,213 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು 89 ಮಂದಿ ಸಾವನ್ನಪ್ಪಿದ್ದಾರೆ. 4,135 ಗುಣಮುಖರಾಗಿದ್ದು 2,989 ಸಕ್ರಿಯ ಕೊರೊನಾ ಪ್ರಕರಣಗಳಾಗಿವೆ.