ಬೆಂಗಳೂರು, ಜೂ 16 (Daijiworld News/MSP): ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮೊದಲ ಪೊಲೀಸ್ ಅಧಿಕಾರಿ ಬಲಿಯಾಗಿದ್ದು ಮತ್ತೊಬ್ಬರು ಎಎಸ್ಐಗೆ ಕೊರೊನಾ ಪಾಸಿಟಿವ್ ಬಂದಿದೆ.
ಮೃತರು ಬೆಂಗಳೂರು ವಿ.ವಿ.ಪುರಂ ಸಂಚಾರಿ ಠಾಣೆ ಎಎಸ್ ಐ ಎಂದು ತಿಳಿದುಬಂದಿದೆ. ಡಯಾಬಿಟೀಸ್ನಿಂದ ಬಳಲುತ್ತಿದ್ದ ಎಎಸ್ಐ 15 ದಿನಗಳಲ್ಲಿ ನಿವೃತ್ತರಾಗಲಿದ್ದು, ಜೂನ್ 13 ರಂದು ಥಣಿಸಂದ್ರದ ಮನೆಯಲ್ಲಿ ದಿಢೀರನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮರಣೋತ್ತರ ತಪಾಸಣೆ ನಡೆಸಿದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಇದಾದ ಬಳಿಕ ಅದೇ ಠಾಣೆಯ ಮತ್ತೊಬ್ಬ ಎಎಸ್ಐಗೂ ಸೋಂಕು ತಗುಲಿದೆ. ವಿಷಯ ತಿಳಿದ ತಕ್ಷಣ ಪೊಲೀಸ್ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಇಡೀ ಠಾಣೆಯನ್ನು ಸೀಲ್ ಡೌನ್ ಮಾಡಿ ಸ್ಯಾನಿಟೈಸರ್ ಮಾಡಲಾಗುತ್ತಿದೆ.ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.