ನವದೆಹಲಿ, ಜೂ 17 (DaijiworldNews/PY) : ಭಾರತ ಶಾಂತಿಯನ್ನು ಬಯಸುತ್ತದೆ. ಆದರೆ, ಪ್ರಚೋದನೆ ನೀಡಿದರೆ ತಕ್ಕ ಪ್ರತಿಕ್ರಿಯೆ ನೀಡುವಂತ ಸಾಮರ್ಥ್ಯ ಭಾರತಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಚೀನಾ ಪಡೆಯೊಂದಿಗೆ ಸೋಮವಾರ ರಾತ್ರಿ ಲಡಾಖ್ನ ಪೂರ್ವ ಭಾಗದ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ಓರ್ವ ಸೇನಾಧಿಕಾರಿ ಸೇರಿದಂತೆ ಮೂವರು ಹುತಾತ್ಮರಾಗಿದ್ದು, ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಸಂವಾದ ನಡೆಸುವ ಮೊದಲು ಹುತಾತ್ಮ ಯೋಧರಿಗೆ ಎರಡು ನಿಮಿಷಗಳ ಮೌನಾಚರಣೆಯ ಮೂಲಕ ಗೌರವ ಸಲ್ಲಿಸಿದರು.