ಬೆಂಗಳೂರು, ಜೂ 17 (DaijiworldNews/PY) : ರಾಜ್ಯದಲ್ಲಿ ಬುಧವಾರ 204 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾಗಿದೆ. ಈ ನಡುವೆ 8 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಕಲಬುರ್ಗಿಯಲ್ಲಿ 19, ಯಾದಗಿರಿಯಲ್ಲಿ 37, ಶಿವಮೊಗ್ಗದಲ್ಲಿ 4, ಬೀದರ್ನಲ್ಲಿ 12, ಬೆಂಗಳೂರು ನಗರದಲ್ಲಿ 35, ದಕ್ಷಿಣ ಕನ್ನಡದಲ್ಲಿ 8, ಧಾರವಾಡದಲ್ಲಿ 8, ಉಡುಪಿಯಲ್ಲಿ 4, ಹಾಸನದಲ್ಲಿ 5, ಬಳ್ಳಾರಿಯಲ್ಲಿ 29, ರಾಯಚೂರಿನಲ್ಲಿ 1, ದಾವಣಗೆರೆಯಲ್ಲಿ 3, ಬಾಗಲಕೋಟೆಯಲ್ಲಿ 4, ಉಡುಪಿ 2, ಮಂಡ್ಯ7, ಮೈಸೂರು 1, ಉತ್ತರಕನ್ನಡ 3 ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಇಂದು 348 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ 4804 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 2824 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 72 ಜನರಿಗೆ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.