ನವದೆಹಲಿ, ಜೂ.18 (DaijiworldNews/MB) : ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ್ದು, ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್.ಶಂಕರ್, ಕಲಬುರ್ಗಿಯ ಸುನಿಲ್ ವಲ್ಯಾಪುರೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಾಪಸಿಂಹ ನಾಯಕ್ ಅವರಿಗೆ ಟಿಕೆಟ್ ನೀಡಿದೆ.
ಇನ್ನು ಜೆಡಿಎಸ್ ತೊರೆದು ಬಿಜೆಪಿ ಸೇರಿ ಹುಣಸೂರಿನಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ಸೋತಿದ್ದ ಮಾಜಿ ಸಚಿವ ಎಚ್.ವಿಶ್ವನಾಥ್ ಅವರಿಗೆ ಪರಿಷತ್ ಚುನಾವಣೆಗೆ ಪಕ್ಷ ಮಣೆ ಹಾಕಿಲ್ಲ. ಆದರೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಎಂಟಿಬಿ ನಾಗರಾಜ್ ಉಪ ಚುನಾವಣೆಯಲ್ಲಿ ಸೋತಿದ್ದರೂ, ಪರಿಷತ್ಗೆ ಟಿಕೆಟ್ ನೀಡಲಾಗಿದೆ.
ಗುರುವಾರ ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಇಂದೇ ಬಿಜೆಪಿ ಹಂತದಲ್ಲಿ ಟಿಕೆಟ್ ಘೋಷಿಸಿದೆ.