ಬೆಂಗಳೂರು, ಜೂ.18 (DaijiworldNews/MB) : ಕೊರೊನಾ ಕಾರಣದಿಂದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ಮುಂದೂಡಿ ರಾಜ್ಯ ಚುನಾವಣಾ ಆಯೋಗ ಹೊರಡಿಸಿರುವ ಆದೇಶವನ್ನು ಮರು ಪರಿಶೀಲನೆ ಮಾಡಲು ಹೈಕೋರ್ಟ್ ಸೂಚಿಸಿದೆ.
ಕಾಂಗ್ರೆಸ್ ಮುಖಂಡರೊಬ್ಬರು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿರುವ ಆದೇಶವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ವಿಭಾಗೀಯ ನ್ಯಾಯಪೀಠಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ವಿಭಾಗೀಯ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸಿ, ಈ ಆದೇಶವನ್ನು ಮರುಪರಿಶೀಲನೆ ನಡೆಸುವಂತೆ ತಿಳಿಸಿದ್ದಾರೆ.
ಹಾಗೆಯೇ ಮರು ಪರಿಶೀಲನೆ ಬಳಿಕ ಕೈಗೊಳ್ಳಲಾಗುವ ನಿರ್ಧಾರದ ಬಗ್ಗೆ ಜು.1ರಂದು ತಿಳಿಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶಿಸಿದೆ.