ಬೆಂಗಳೂರು, ಜೂ 18(Daijiworld News/MSP): ಕೊವೀಡ್ ಸೋಂಕಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದಾದರೆ ಎಷ್ಟು ದರ ಪಡೆದುಕೊಳ್ಳಬೇಕು ಎನ್ನುವುದರ ಬಗ್ಗೆ ಶೀಘ್ರವೇ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಟಾಸ್ಕ್ ಪೋರ್ಸ್ ಸಭೆ ಬಳಿಕ ಮಾತನಾಡಿದ ಸಚಿವ ಶ್ರೀರಾಮುಲು, " ಗುಜರಾತ್ ರಾಜ್ಯದಲ್ಲಿ ಚಿಕಿತ್ಸೆಗೆ ದರ ನಿಗದಿಪಡಿಸಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿಯ ಚಿಕಿತ್ಸೆಗೆ ಇಂತಿಷ್ಟೇ ದರ ನಿಗದಿ ಆಗಬೇಕು ಎಂದು ಡಾಕ್ಟರ್ ಅಸೋಸಿಯೇಷನ್ ಮನವಿ ಮಾಡಿದೆ ಎಂದು ತಿಳಿದರು.
ದರ ನಿಗದಿ ಕುರಿತು ತಜ್ಞರ ಸಲಹೆಯನ್ನೂ ಪಡೆಯಲಾಗುವುದು. ಇನ್ನು ಈ ವಿಚಾರ ಕ್ಯಾಬಿನೆಟ್ನಲ್ಲಿ ಚರ್ಚೆಯಾಗಬೇಕಾಗಿರುವುದರಿಂದ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಚರ್ಚೆ ನಡೆಸಿ ಆ ಬಳಿಕ ಖಾಸಗಿ ಆಸ್ಪತ್ರೆಗಳ ದರವನ್ನು ನಿರ್ಧರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.