ನವದೆಹಲಿ, ಜೂ 19 (DaijiworldNews/PY) : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಒಂದೇ ದಿನ 13,586 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 336 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,80,532 ಏರಿಕೆಯಾಗಿದ್ದು, ಒಟ್ಟು 12,573 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸದ್ಯ 1,63,248 ಪ್ರಕರಣಗಳು ಸಕ್ರಿಯವಾಗಿದ್ದು, 2,04,711 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ದೇಶದಲ್ಲೇ ಅಧಿಕ ಕೊರೊನಾ ಸೋಂಕು ದಾಖಲಾಗಿರುವ ಮಹಾರಾಷ್ಟ್ರದಲ್ಲಿ 1,20,504 ಜನರಿಗೆ ಸೋಂಕು ತಗುಲಿದ್ದು 5,751 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 60,838 ಮಂದಿ ಗುಣಮುಖರಾಗಿದ್ದು 60,838 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ನಾಟಕದಲ್ಲಿ 7,734 ಮಂದಿಗೆ ಸೋಂಕು ದೃಢಪಟ್ಟಿದ್ದು 102 ಮಂದಿ ಸಾವನ್ನಪ್ಪಿದ್ದಾರೆ. 2,828 ಸಕ್ರಿಯ ಪ್ರಕರಣಗಳಾಗಿದ್ದು 4804 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ತಮಿಳುನಾಡಿನಲ್ಲಿ 52,334, ದೆಹಲಿಯಲ್ಲಿ 49,979, ಗುಜರಾತ್ನಲ್ಲಿ ಕೊರೊನಾ ಪ್ರಕರಣಗಳು ದಾಖಲಾಗಿದೆ.