ಮೈಸೂರು, ಜೂ.20 (DaijiworldNews/MB) : "ಜಿಎಸ್ಟಿ ಹಣ ಸೇರಿದಂತೆ 15ನೇ ಹಣಕಾಸು ಆಯೋಗದಡಿ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಅನುದಾನವನ್ನು ಕೇಳಿ ಪಡೆಯಲು ಕೂಡಾ ಮುಖ್ಯಮಂತ್ರಿ ಯಡಿಯೂರಪ್ಪಗೆ ದಂ ಇಲ್ಲ" ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಶುಕ್ರವಾರ ಕುಟುಕಿದರು.
"ಅಧಿವೇಶನದಲ್ಲಿ ಎಪಿಎಂಸಿ, ಕಾರ್ಮಿಕ, ಭೂ ಸುಧಾರಣೆ ಕಾಯ್ದೆಗಳ ಕುರಿತಾಗಿಯೂ ಚರ್ಚೆ ನಡೆಸಬೇಕು. ಆದರೆ ರಾಜ್ಯ ಸರ್ಕಾರ ಈ ರೈತ ವಿರೋಧಿ ತಿದ್ದುಪಡಿ ಮಸೂದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದೆ. ರಾಜ್ಯವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಇದರ ವಿರುದ್ಧವಾಗಿ ನಮ್ಮ ಹೋರಾಟ ಎಂದಿಗೂ ಅಂತ್ಯವಾಗುವುದಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು.
''ಅಷ್ಟು ಮಾತ್ರವಲ್ಲದೇ ಪ್ರಧಾನಿ ಮೋದಿ ತಾಳಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರವಲ್ಲದೇ ದೇಶದಲ್ಲಿ ಹೆಚ್ಚಿನವರು ಕುಣಿಯುತ್ತಿದ್ದಾರೆ'' ಎಂದು ಟೀಕೆ ಮಾಡಿದ್ದಾರೆ.