ಬೆಂಗಳೂರು, ಜೂ.20 (DaijiworldNews/MB) : ಇದು ಪ್ರಚೋದನೆ ಹಾಗೂ ಪ್ರತಿಕಾರದ ಸಮಯವಲ್ಲ. ರಾಷ್ಟ್ರೀಯತೆಯ ಕೂಗಾಟ ನಿಲ್ಲಿಸಿ. ಇತ್ತೀಚೆಗೆ ಸಶಸ್ತ್ರ ಪಡೆಗಳನ್ನು ಕೂಡಾ ರಾಜಕೀಯಕ್ಕೆ ಒಳಪಡಿಸುವುದು ಬಹು ಅಪಾಯಕಾರಿ ಪ್ರಯತ್ನ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮೋದಿ ಅವರಿಗೆ ಪತ್ರ ಬರೆದಿರುವ ದೇವೇಗೌಡ ಅವರು, ಭಾರತ ಹಾಗೂ ಚೀನಾ ಗಡಿ ಸಂಘರ್ಷದ ವಿಚಾರವಾಗಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಕೆಲವು ಮಾಧ್ಯಮಗಳು ಸುಳ್ಳು ಸುದ್ದಿಗಳ ಮೂಲಕವಾಗಿಯೇ ನಮ್ಮ ಸೈನಿಕರು ಮತ್ತು ರಾಜತಾಂತ್ರಿಕ ಸಿಬ್ಬಂದಿಯ ಪ್ರಾಣಕ್ಕೆ ಅಪಾಯವನ್ನುಂಟುಮಾಡುತ್ತಿದ್ದು ಈ ಕುರಿತಾಗಿ ಸರ್ಕಾರ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ವಾಹಿನಿಗಳು ಈ ಬಗ್ಗೆ ವರದಿ ಮಾಡುವುದನ್ನು ನಿಲ್ಲಿಸಬೇಕು ಎಂದು ನನ್ನ ಅರ್ಥವಲ್ಲ. ಆದರೆ ಬಲವಾದ ಭಾಷೆಯನ್ನು ಬಳಸಬಾರದು ಎಂದು ಒತ್ತಾಯಿಸಿದ್ದಾರೆ.