ಬೆಂಗಳೂರು, ಜೂ 20 (Daijiworld News/MSP): ಕೊರೊನಾ ಹರಡುವಿಕೆಯ ವೇಗ ಇನ್ನು ಕಡಿಮೆಯಾಗಿಲ್ಲ. ಬೆಂಗಳೂರಿನ ಹಲವೆಡೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ತಮ್ಮ ಅನಗತ್ಯ ಓಡಾಟಗಳನ್ನು ನಿಲ್ಲಿಸಿ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೋವಿಡ್ ಸೋಂಕಿನ ಕುರಿತಾಗಿ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ ಸಚಿವರು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ ಆದುದರಿಂದ ನಮ್ಮ ನಮ್ಮ ಆರೋಗ್ಯದ ದೃಷ್ಟಿಯಿಂದ ಅನಗತ್ಯ ಓಡಾಟಗಳನ್ನು ನಿಲ್ಲಿಸಬೇಕಾಗಿದೆ, ಅಲ್ಲದೆ ಅಗತ್ಯ ಕಾರ್ಯಗಳಿಗೆ ಹೊರಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡತಕ್ಕದು. ಸಾಮಾಜಿಕ ಅಂತರ ಕಾಯ್ದುಕೊಂಡೆ ತಮ್ಮ ವ್ಯಾಪಾರ-ವಹಿವಾಟು ಹಾಗೂ ಇತರ ಕೆಲಸಗಳನ್ನು ನಡೆಸಬೇಕಾಗಿ ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಹೀಗಾಗಿ ಜನ ಸ್ವಯಂ ಜಾಗೃತಿ ವಹಿಸಬೇಕಾದ ಅಗತ್ಯ ಮತ್ತು ಅನಿವಾರ್ಯತೆ ಇದೆ. ಸೋಂಕಿನ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ.