ಬೆಂಗಳೂರು, ಜೂ.20 (DaijiworldNews/MB) : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೋರ್ವ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಇತ್ತೀಚೆಗೆ ಕೊರೊನಾ ಸೋಂಕಿನಿಂದಾಗಿ ನಗರದ ಎಎಸ್ಐಯೊಬ್ಬರು (ಸಹಾಯಕ ಪೊಲೀಸ್ ಸಬ್ಇನ್ಸ್ಪೆಕ್ಟರ್) ಸಾವನ್ನಪ್ಪಿದ್ದು ಇದೀಗ ಕಲಾಸಿಪಾಳ್ಯ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ 54 ವರ್ಷದ ಹೆಡ್ ಕಾನ್ಸ್ಟೆಬಲ್ ಶನಿವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.
ಎರಡು ದಿನಗಳ ಹಿಂದೆ ಕಲಾಸಿಪಾಳ್ಯ ಠಾಣೆಯ ಹೆಡ್ಕಾನ್ಸ್ಟೆಬಲ್ ಸೇರಿದಂತೆ ಎಂಟು ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು ಆಸ್ಪತ್ರೆಯಲ್ಲಿದ್ದ ಇವರ ಪೈಕಿ ಹೆಡ್ ಕಾನ್ಸ್ಟೆಬಲ್ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇನ್ನು ಬೆಂಗಳೂರು ವಿಲ್ಸನ್ ಗಾರ್ಡನ್ ಠಾಣೆ 59 ವರ್ಷದ ಎಎಸ್ಐಯೊಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆಯನ್ನು ಸ್ಯಾನಿಟೈಸಿಂಗ್ ಮಾಡಲಾಗಿದೆ. ಹಲವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.