ನವದೆಹಲಿ, ಜೂ 20 (Daijiworld News/MSP): ದೆಹಲಿಗೆ ಆಗಮಿಸುವವರಿಗೆ 5 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಆದೇಶದಲ್ಲಿ ಆಮ್ ಆದ್ಮಿ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದ್ದು, ಇದನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರೋಧಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ನಡೆದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಿರ್ಧಾರವನ್ನು ಕೇಜ್ರಿವಾಲ್ ವಿರೋಧಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರ ರಾಜಧಾನಿಯಲ್ಲಿ ಈಗಾಗಲೇ ಆರೋಗ್ಯ ಸಿಬ್ಬಂದಿಗಳ ಕೊರತೆ ಇದೆ ಸಾವಿರಾರು ರೋಗಿಗಳಿಗೆ ಕ್ಯಾರೆಂಟೈನ್ ಕೇಂದ್ರಗಳಲ್ಲಿ ವೈದ್ಯರು ಮತ್ತು ದಾದಿಯರನ್ನು ವ್ಯವಸ್ಥೆ ಮಾಡುವುದು ಹೇಗೆ ? ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ದೇಶಾದ್ಯಂತ ರೋಗಲಕ್ಷಣವಿಲ್ಲದ ಮತ್ತು ರೋಗಲಕ್ಷಣದ ಪ್ರಕರಣಗಳಿಗೆ ಮನೆ- ಸಾಂಸ್ಥಿಕ ಕ್ವಾರಂಟೈನ್ ಗೆ ಅವಕಾಶ ನೀಡುತ್ತಿರುವಾಗ ರಾಷ್ಟ್ರ ರಾಜಧಾನಿಯಲ್ಲಿ ಏಕೆ ವಿಭಿನ್ನ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಸಭೆಯಲ್ಲಿ ಪ್ರಶ್ನಿಸಿದ್ದಾರೆ.
ದೆಹಲಿಯ ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆ ಇದೆ. ಗೃಹ ಬಂಧನ ವಿಧಿಸುವುದರಿಂದ ವ್ಯಕ್ತಿಗೆ ಕೊರೊನಾ ಸೋಂಕು ಇದ್ದು , ಲಕ್ಷಣಗಳಿಲ್ಲದಿದ್ದರೆ ಇಡೀ ಕುಟುಂಬಕ್ಕೆ ಸೋಂಕು ಹರಡುತ್ತದೆ. ಹೀಗಾಗಿ ದೆಹಲಿಗೆ ಬರುವವರಿಗೆ ಐದು ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿರಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಆದೇಶಿಸಿದ್ದರು.