ಬೆಂಗಳೂರು, ಜೂ.20 (DaijiworldNews/MB) : ರಾಜ್ಯ ಸರ್ಕಾರವು ಕೊರೊನಾ ಲಾಕ್ಡೌನ್ ನಿರ್ಬಂಧವನ್ನು ಮತ್ತಷ್ಟು ಸಡಿಲಿಕೆ ಮಾಡಿದ್ದು ಇದೀಗ ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ ರಾತ್ರಿ 9 ಗಂಟೆಯೊಳಗೆ ತೆರೆಯುವಂತೆ ಅನುಮತಿ ನೀಡಿದ್ದು ಈ ಸಮಯದೊಳಗೆ ತೆರೆಯುವಂತೆ ಸ್ಥಳೀಯ ಮಹಾನಗರಪಾಲಿಕೆ, ಪಾಲಿಕೆಗಳು ತೀರ್ಮಾನ ಕೈಗೊಳ್ಳಬಹುದು ಎಂದು ತಿಳಿಸಿದೆ.
ಕೇಂದ್ರ ಗೃಹ ಸಚಿವಾಲಯವು ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ಜೂನ್ 30ರವರೆಗೆ ಮುಂದುವರೆಸಿ ಕಂಟೈನ್ಮೆಂಟ್ ವಲಯ ಅಲ್ಲದ ಪ್ರದೇಶದಲ್ಲಿ ಅನ್ಲಾಕ್ 1.0 ಹೊಸ ಮಾರ್ಗಸೂಚಿ ಜಾರಿಗೆ ತಂದಿತ್ತು. ಆ ಪ್ರಕಾರವಾಗಿ ಬೆಳಿಗ್ಗೆ 5 ರಿಂದ ರಾತ್ರಿ 9 ಗಂಟೆಯೊಳಗೆ ತೆರೆಯುವಂತೆ ಸ್ಥಳೀಯ ಮಹಾನಗರಪಾಲಿಕೆ, ಪಾಲಿಕೆಗಳು ತೀರ್ಮಾನ ಕೈಗೊಳ್ಳಲು ಅವಕಾಶ ನೀಡಲಾಗಿದೆ.
ಈ ಹಿಂದೆಯ ಆದೇಶದಂತೆ ಬೆಳಿಗ್ಗೆ 7ರಿಂದ 9 ಗಂಟೆವರೆಗೆ ಮತ್ತು ಸಂಜೆ 4ರಿಂದ 7 ಗಂಟೆವರೆಗೆ ಪಾರ್ಕ್ಗಳನ್ನು ಸಾರ್ವಜನಿಕರಿಗಾಗಿ ತೆರೆಯಲಾಗುತ್ತಿದ್ದು ಈಗ ಆಯಾ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ನಿರ್ಧರಿಸಬಹುದಾಗಿದೆ.