ಬೆಂಗಳೂರು, ಜೂ 20 (DaijiworldNews/PY) : ರಾಜ್ಯದಲ್ಲಿ ಶನಿವಾರ 416 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,697ಕ್ಕೆ ಏರಿಕೆಯಾಗಿದೆ. ಈ ನಡುವೆ 9 ಮಂದಿ ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಕಲಬುರ್ಗಿಯಲ್ಲಿ 34, ಶಿವಮೊಗ್ಗದಲ್ಲಿ 1, ಬೀದರ್ನಲ್ಲಿ 12, ಬೆಂಗಳೂರು ನಗರದಲ್ಲಿ 55, ದಕ್ಷಿಣ ಕನ್ನಡದಲ್ಲಿ 4, ಧಾರವಾಡದಲ್ಲಿ 4, ಹಾಸನದಲ್ಲಿ 16, ರಾಯಚೂರಿನಲ್ಲಿ15, ಬೆಳಗಾವಿ 1, ದಾವಣಗೆರೆಯಲ್ಲಿ 3, ಬಾಗಲಕೋಟೆಯಲ್ಲಿ 2, ಉಡುಪಿ 13, ಮಂಡ್ಯ 4, ಮೈಸೂರು 22, ಹಾವೇರಿ 12, ವಿಜಯಪುರ 9, ಚಿಕ್ಕಮಗಳೂರು 8, ಉತ್ತರಕನ್ನಡ 4 ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಇಂದು 181 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ 5,391ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 3,170 ಸಕ್ರಿಯ ಪ್ರಕರಣಗಳಿವೆ.