ಬೆಂಗಳೂರು, ಜೂ.21 (DaijiworldNews/MB) : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೋರ್ವ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದು ವಿಲ್ಸನ್ ಗಾರ್ಡನ್ ಸಂಚಾರ ಠಾಣೆಯ ಸಬ್ಇನ್ಸ್ಪೆಕ್ಟರ್ರೊಬ್ಬರು ಭಾನುವಾರ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
59 ವರ್ಷದ ಎಎಸ್ಐ ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇತ್ತೀಚೆಗೆ ಕೊರೊನಾ ಸೋಂಕಿನಿಂದಾಗಿ ನಗರದ ಎಎಸ್ಐಯೊಬ್ಬರು (ಸಹಾಯಕ ಪೊಲೀಸ್ ಸಬ್ಇನ್ಸ್ಪೆಕ್ಟರ್) ಸಾವನ್ನಪ್ಪಿದ್ದರು. ಬಳಿಕ ಕಲಾಸಿಪಾಳ್ಯ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ 54 ವರ್ಷದ ಹೆಡ್ ಕಾನ್ಸ್ಟೆಬಲ್ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದರು.