ನವದೆಹಲಿ, ಜೂ 22(DaijiworldNews/PY) : ಗಡಿ ನಿಯಂತ್ರಣ ರೇಖೆ (ಎಲ್ಎಸಿ)ಯ ಉದ್ದಕ್ಕೂ ಶಸ್ತ್ರಾಸ್ತ್ರ ಬಳಸುವ ಬಗ್ಗೆ ಕೆಲವು ನಿಯಮಗಳನ್ನು ಬದಲಾಯಿಸಿಕೊಳ್ಳಲು ಭಾರತ ಸರ್ಕಾರ ಮುಂದಾಗಿದೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಮೂರೂ ಸೇನೆಯ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಂಡಿದ್ದು, ಗಡಿ ನಿಯಂತ್ರಣ ರೇಖೆಯ ಬಳೀ ನಿಯೋಜಿತವಾಗಿರುವ ಕ್ಷೇತ್ರದ ಕಮಾಂಡರ್ಗಳಿಗೆ ಶಸ್ತ್ರಾಸ್ತ್ರಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಬಳಸಬಹುದು ಎಂದು ತಿಳಿಸಲಾಗಿದೆ.
ಭಾರತ ಹಾಗೂ ಚೀನಾ ನಡುವೆ 1962 ಹಾಗೂ 2005ರಲ್ಲಿ ಆಗಿರುವ ಒಪ್ಪಂದದ ಪ್ರಕಾರ ಎರಡೂ ದೇಶಗಳು 3,488 ಕಿ.ಮೀ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಶಸ್ತ್ರಾಸ್ತ್ರ ಬಳಸುವಂತಿಲ್ಲ. ಆದರೆ, ಈ ಒಪ್ಪಂದವನ್ನು ಚೀನಾ ಉಲ್ಲಂಘಿಸಿದ ಕಾರಣ ಭಾರತ ಕೂಡಾ ತಾನು ಪಾಲಿಸಬೇಕಾದಂತ ನಿಯಮಗಳನ್ನು ಬದಲಾಯಿಸಲು ತೀರ್ಮಾನ ಮಾಡಿದ್ದು. ಶಸ್ತ್ರಾಸ್ತ್ರಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಬಳಸಲು ನಿರ್ಧರಿಸಿದೆ.