ಪುಲ್ವಾಮ,ಜೂ 23 (Daijiworld News/MSP): ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಬ್ಯಾಂಡೂ ಜೂ ಪ್ರದೇಶದಲ್ಲಿ ಮತ್ತೆ ಭಯೋತ್ಪಾದಕರು ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ.
ಈ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರನ್ನು ಎನ್ ಕೌಂಟರ್ ಮೂಲಕ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ವರದಿಯಾಗಿದೆ. ಸಿಆರ್ಪಿಎಫ್ ಕ್ಯಾಂಪ್ ಮೇಲೆ ಗ್ರೆನೇಡ್ ದಾಳಿ ನಡೆಸುವ ಮೂಲಕ ಈ ಬಾರಿ ಉಗ್ರರು ಸೇನೆಯನ್ನು ಟಾರ್ಗೆಟ್ ಮಾಡಿದ್ದಾರೆ.
ಜಮ್ಮು ಕಾಶ್ಮೀರದ ಪೋಲಿಸ್, ಭಾರತೀಯ ಸೇನೆ, ಸಿಆರ್ ಪಿ ಎಫ್ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಗ್ರಾಮದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ಆರಂಭಿಸಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ.
ಇದೇ ವೇಳೆ ಉಗ್ರರು ಹಾರಿಸಿದ ಗುಂಡು ಸಿಆರ್ ಪಿಎಫ್ ಯೋಧರೊಬ್ಬರಿಗೆ ತಗುಲಿ ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.