ನವದೆಹಲಿ, ಜೂ 23(DaijiworldNews/PY) : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,933 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,40,450ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲೇ 312 ಮಂದಿ ಕೊರೊನಾಗೆ ಸಾವನ್ನಪ್ಪಿದ್ದು, ಈವರೆಗೆ 14, 011 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು ದೇಶದಲ್ಲಿಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಈವರೆಗೆ 2,48,190 ಮಂದಿ ಗುಣಮುಖರಾಗಿದ್ದಾರೆ. ಹಾಗೆಯೇ 1,78,014 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ ಅಧಿಕ ಕೊರೊನಾ ಪ್ರಕರಣಗಳು ದೃಢಪಟ್ಟಿರುವ ಮಹಾರಾಷ್ಟ್ರದಲ್ಲಿ 1,35,796 ಜನರಿಗೆ ಸೋಂಕು ತಗುಲಿದ್ದು, 6,170 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 65,744 ಮಂದಿ ಗುಣಮುಖರಾಗಿದ್ದಾರೆ. ದೆಹಲಿಯಲ್ಲಿ 62,655 ಮಂದಿಗೆ ಸೋಂಕು ದೃಢಪಟ್ಟಿದ್ದು, 2175 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 62, 087 ಮಂದಿಗೆ ಸೋಂಕು ತಗುಲಿದ್ದು, 32,754 ಮಂದಿ ಗುಣಮುಖರಾಗಿದ್ದಾರೆ. 757 ಮಂದಿ ಸಾವಿಗೀಡಾಗಿದ್ದಾರೆ.
ದಿನದಿಂದ ದಿನಕ್ಕೆ ದೇಶದಲ್ಲಿ ಕೊರೊನಾ ಸೋಂಕಿತರ ಹೆಚ್ಚಾಗುತ್ತಿದ್ದು, ವಿಶ್ವದ ಕೊರೊನಾ ಬಾಧಿಕ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ.