ಯಾದಗಿರಿ, ಜೂ 24(Daijiworld News/MSP): ಹಾಡುಹಗಲೇ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ನಗರದ ಚಿತ್ತಾಪುರ ರಸ್ತೆಯ ಎಸ್ಪಿ ಕಚೇರಿ ಸಮೀಪ ಜೂ.24 ರ ಬುಧವಾರ ನಡೆದಿದೆ.
ಶಾಸಕ ರಾಜುಗೌಡರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕ ಮರಲಿಂಗಪ್ಪ ಕರ್ನಾಳ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಚೆ ಕೊಚ್ಚಿದ್ದಾರೆ. ಗಂಭೀರ ಗಾಯಗೊಂಡ ರಕ್ತದ ಮಡುವಿನಲ್ಲಿ ಬಿದ್ದ ಒದ್ದಾಡುತ್ತಿದ್ದ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕಾರಿನಲ್ಲಿ ಬಂದ ಮೂವರು ಅಪರಿಚಿತರು ಕರ್ನಾಳ್ ಮೇಲೆ ತಲವಾರು ಹಾಗೂ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಜಿಪಂ ಬಿಜೆಪಿ ಸದಸ್ಯ ಮರಿಲಿಂಗಪ್ಪರ ಮೇಲೆ ನಡೆದ ಮಾರಣಾಂತಿಕ ದಾಳಿಗೆ ಸ್ಥಳೀಯರು ಬೆಚ್ಚಿಬಿದ್ದಿದ್ದು ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.