ಕಲಬುರಗಿ, ಜೂ24 (DaijiworldNews/MB) : ''ಯಾವುದೇ ಕಾರಣಕ್ಕೂ ತೆರಿಗೆ ಮನ್ನಾ ಮಾಡಲ್ಲ'' ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಕಲಬುರಗಿಯಲ್ಲಿ ನಗರ ಪ್ರದಕ್ಷಿಣೆ ಮಾಡಿ, ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ, ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ''ಜನರ ತೆರಿಗೆಯ ಹಣವನ್ನು ಸರ್ಕಾರ ಸ್ವಂತಕ್ಕೆ ಬಳಸಿಕೊಳ್ಳಲ್ಲ. ಅದನ್ನು ಆಯಾ ಜಿಲ್ಲೆಯ ಅಭಿವೃದ್ಧಿಗಾಗಿ ಬಳಸಲಾಗುತ್ತದೆ. ಹೀಗಿರುವಾಗ ತೆರಿಗೆ ಪಾವತಿ ಅವಧಿ ವಿಸ್ತರಿಸಬಹುದೇ ಹೊರತು ತೆರಿಗೆ ಮನ್ನಾ ಮಾಡಲ್ಲ'' ಎಂದು ಹೇಳಿದರು.
ಹಾಗೆಯೇ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಕುರಿತಾಗಿ ಮಾತನಾಡಿ, ''ಲಾಕ್ಡೌನ್ ಮತ್ತೆ ಜಾರಿ ಮಾಡುವುದು ಮುಖ್ಯಮಂತ್ರಿಯವರಿಗೆ ಬಿಟ್ಟ ವಿಚಾರ. ಅವರು ಕೇಂದ್ರದೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತಾರೆ'' ಎಂದರು.