ತಿರುವನಂತಪುರ, ಜೂ24 (DaijiworldNews/MB) : ಮಕ್ಕಳನ್ನು ತನ್ನ ದೇಹದ ಮೇಲೆ ಚಿತ್ರ ರಚಿಸಲು ಬಳಸಿಕೊಂಡ ಆರೋಪದಲ್ಲಿ ಹೋರಾಟಗಾರ್ತಿ ರೆಹಾನಾ ಫಾತಿಮಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಬಿಜೆಪಿ ಕಾರ್ಯಕರ್ತ ಅರುಣ್ ಪ್ರಕಾಶ್ ಎಂಬುವವರು ಮಂಗಳವಾರ ತಿರುವಳ್ಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ರೆಹಾನಾ ಅವರ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ತನ್ನ ದೇಹದ ಮೇಲೆ ಚಿತ್ರ ರಚಿಸಲು ಬಳಸಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೇ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ರೆಹಾನಾ ಫಾತಿಮಾ, ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು 2018ರಲ್ಲಿ ಸುಪ್ರೀಂ ಕೋರ್ಟ್ ತೆರವು ಮಾಡಿದ ಬಳಿಕ ದೇಗುಲ ಪ್ರವೇಶಕ್ಕೆ ಮುಂದಾಗಿದ್ದರು. ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಇವರ ಮೇಲೆ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ನಂತರ ಬಿಎಸ್ಎನ್ಎಲ್ ಕೆಲಸದಿಂದ ಅಮಾನತು ಮಾಡಿತ್ತು.
ಇದೀಗ ಅವರ ಮೇಲೆ ಮಕ್ಕಳನ್ನು ತನ್ನ ದೇಹದ ಮೇಲೆ ಚಿತ್ರ ರಚಿಸಲು ಬಳಸಿಕೊಂಡ ಆರೋಪದಲ್ಲಿ ಪ್ರಕರಣ ದಾಖಲಾಗಿದ್ದು ಅರೆನಗ್ನವಾಗಿ ಮಲಗಿರುವ ರೆಹಾನಾ ದೇಹದ ಮೇಲೆ ಇಬ್ಬರು ಮಕ್ಕಳು ಚಿತ್ರ ಬಿಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ದೂರುದಾರರು ಮಾಡಿರುವ ಆರೋಪದ ಬಗ್ಗೆ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.