ಬೆಂಗಳೂರು, ಜೂ 25(DaijiworldNews/PY) : ತೀವ್ರವಾಗಿ ಹರಡುತ್ತಿರುವ ಕೊರೊನಾ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ನಾಳೆ ಬೆಂಗಳೂರಿನ ಶಾಸಕರ, ಸಚಿವರ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಗುರುವಾರ ಮಾತನಾಡಿದ ಅವರು, ಸಭೆಯಲ್ಲಿ ಚಚೆ೯ ನಡೆಸಿ ಮುಂದಿನ ನಿಧಾ೯ರ ಕೈಗೊಳ್ಳಲಾಗುವುದು. ದೇಶದ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿ ಇದೆ ಎಂದು ತಿಳಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತೀವ್ರವಾಗಿ ಹರಡುತ್ತಿರುವ ಕೊರೊನಾ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸಬಹುದು ಎಂದು ಮನವಿ ಮಾಡಿದ್ದಾರೆ.