ಬೆಂಗಳೂರು, ಜೂ 26 (Daijiworld News/MSP):ಕೋವಿಡ್-19 ಸೋಂಕಿತರ ಸಂಖ್ಯೆ ದಿನೇ ದಿನೇ ದ್ವಿಗುಣಗೊಳ್ಳುತ್ತಿರುವುದರಿಂದ ಮತ್ತೆ ಕಠಿಣ ಲಾಕ್ ಡೌನ್ ನಿಯಮ ಜಾರಿಗೆ ತರಬೇಕಾದ ಅನಿವಾರ್ಯತೆ ಉಂಟಾಗಿದ್ದು ಈ ವಿಚಾರವಾಗಿ ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಚರ್ಚೆ ನಡೆಯುತ್ತಿತ್ತು.
ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವುದು ಅತಿ ಮುಖ್ಯವಾಗಿದ್ದು. ಹಾಗಾಗಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ವಿಧಾನಸೌಧದ ಬಳಿ ಮಾತನಾಡಿದ ಅವರು, ಬೆಂಗಳೂರು ಕೊರೊನಾ ನಿಯಂತ್ರಣದಲ್ಲಿ ದೇಶಕ್ಕೆ ಮಾದರಿಯಾಗಿತ್ತು. ಆದ್ರೆ ಈಗ ರಾಜ್ಯ ರಾಜಧಾನಿಯಲ್ಲಿಯೇ ಕೊರೊನಾ ಹೆಚ್ಚಾಗುತ್ತಿದೆ. ಇದಕ್ಕಾಗಿ ಇಂದು ಶಾಸಕರ ಸಭೆ ಕರೆದಿದ್ದು, ಅವರೊಂದಿಗೆ ಚರ್ಚೆ ನಡೆಸಿ ಎಲ್ಲಾ ಶಾಸಕರು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಸೋಂಕು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸುವುದಾಗಿ ಅವರು ಹೇಳಿದ್ದಾರೆ