ಬೆಂಗಳೂರು, ಜೂ 26(DaijiworldNews/PY) : ನಮ್ಮ ಜನರ ರಕ್ಷಣೆಗಾಗಿ ನಾವು ಏನಾದರು ಮಾಡುವುದಕ್ಕೆ ಹೋದರೆ ಅವನ್ಯಾರೋ ಡಿಸಿಎಂ ಬಾಯಿಗೆ ಬಂದ ಹಾಗೇ ಮಾತನಾಡ್ತಾನೆ. ಡಿ.ಕೆ.ಶಿವಕುಮಾರ್ ಯಾರು ಅಂತ ಕೇಳುತ್ತಾರೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಅವರ ವಿರುದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ನಂತರ ಸಿಎಂ ಅವರು ಶಾಸಕರ ಸಭೆ ಕರೆದಿದ್ದಾರೆ. ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಎಲ್ಲವನ್ನೂ ಸರ್ಕಾರಕ್ಕೆ ಬಿಟ್ಟಿದ್ದೇವೆ. ಯಾವುದೇ ತೀರ್ಮಾನವನ್ನಾದರು ತೆಗೆದುಕೊಳ್ಳಲಿ ಎಂದರು.
ನಾವು ಸಂಸದರು ಸೇರಿದಂತೆ ವೈದ್ಯಾಧಿಕಾರಿ ಹಾಗೂ ರಾಮನಗರ ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಿ ಕೆಲವೊಂದು ನಿರ್ಧಾರಗಳನ್ನು ಕೈಗೊಂಡಿದ್ದೆವು. ಆದರೆ, ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಡಿಸಿಎಂ ಅವರು ತಮಗೆ ತಿಳಿದಂತೆ ಮಾತನಾಡುತ್ತಾರೆ. ನಮ್ಮ ಶಾಸಕರನ್ನು ಇಂದು ಸಭೆಗೆ ಕಳುಹಿಸಿದ್ದು, ಅವರ ಕ್ಷೇತ್ರದಲ್ಲಿನ ಪರಿಸ್ಥಿತಿಯನ್ನು ತಿಳಿಸುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.