ನವದೆಹಲಿ, ಜೂ. 27 (DaijiworldNews/MB) : ಕಳೆದ ಒಂದು ದಿನದಲ್ಲಿ ದೇಶದಲ್ಲಿ 18,552 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ. ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,08,953 ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 384 ಮಂದಿ ಸೋಂಕಿತರು ಸಾವನ್ನಪ್ಪಿದ್ದು ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 15,685 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡಾ ಏರಿಕೆಯಾಗುತ್ತಿದ್ದು 2,95,881 ಮಂದಿ ಗುಣಮುಖರಾಗಿದ್ದು 1,97,387 ಮಂದಿ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಕಳೆದ 24 ಗಂಟೆಗಳಲ್ಲಿ 2,20,479 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಿದ್ದು ಜೂನ್ 26ರ ವರೆಗೂ 79,96,707 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
ದೇಶದಲ್ಲಿ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗಿರುವ ಮಹಾರಾಷ್ಟ್ರದಲ್ಲಿ 1,52,765 ಜನರಿಗೆ ಸೋಂಕು ದೃಢಪಟ್ಟಿದ್ದು 7,106 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 79,815 ಮಂದಿ ಗುಣಮುಖರಾಗಿದ್ದು 65,844 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ನಾಟಕದಲ್ಲಿ 11,005 ಮಂದಿಗೆ ಸೋಂಕು ಪಾಸಿಟಿವ್ ಆಗಿದ್ದು 180 ಮಂದಿ ಸಾವನ್ನಪ್ಪಿದ್ದಾರೆ. 3,909 ಸಕ್ರಿಯ ಪ್ರಕರಣಗಳಾಗಿದ್ದು 6,916 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ತಮಿಳುನಾಡಿನಲ್ಲಿ 74622, ದೆಹಲಿಯಲ್ಲಿ 77,240, ಗುಜರಾತ್ನಲ್ಲಿ 30095, ಉತ್ತರ ಪ್ರದೇಶದಲ್ಲಿ 20943, ರಾಜಸ್ತಾನದಲ್ಲಿ 16660, ಮಧ್ಯಪ್ರದೇಶದಲ್ಲಿ 12798, ಪಶ್ಚಿಮ ಬಂಗಾಳದಲ್ಲಿ 16190, ತೆಲಂಗಾಣದಲ್ಲಿ 12349 ಕೊರೊನಾ ಪ್ರಕರಣಗಳು ದಾಖಲಾಗಿದೆ.