ಬೆಂಗಳೂರು, ಜೂ 28(DaijiworldNews/PY) : ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ನಡುವೆ ಇತರ ರಾಜ್ಯಗಳಿಂದ ಬರುವು ವ್ಯಕ್ತಿಗಳನ್ನು ಕರ್ನಾಟಕಕ್ಕೆ ಸ್ಥಳಾಂತರ ಮಾಡಲು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕಕ್ಕೆ ಹೊರರಾಜ್ಯದಿಂದ ಪ್ರವೇಶ ಮಾಡುವವರು ಕೆಲವು ನಿಯಮಗಳನ್ನು ಪಾಲಿಸಬೇಕಾಗಿದೆ. ಹಾಗಾಗಿ ಕ್ವಾರಂಟೈನ್ ಅವಧಿಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಆಗಮಿಸುವವರು 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನ ಹೋಂ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ. ಅಲ್ಲದೇ, ಮಹಾರಾಷ್ಟ್ರವನ್ನು ಹೊರತು ಪಡಿಸಿ ಉಳಿದ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರು 14 ದಿನ ಹೋಂ ಕ್ವಾರಂಟೈನ್ನಲ್ಲಿ ಇರಬೇಕು ಎಂದು ಪ್ರಕಟಣೆಯಲ್ಲಿ ವಿವರಿಸಿದೆ.
ಕ್ವಾರಂಟೈನ್ ಕಣ್ಗಾವಲನ್ನು ತಾಂತ್ರಿಕ ಹಾಗೂ ಕಣ್ಗಾವಲು ತಂಡ ಹೆಚ್ಚಿಸುವ ಮೂಲಕ ಸದೃಢಗೊಳಿಸಲಾಗಿದೆ. ಈ ಹಿನ್ನೆಲೆ ಪ್ರಸ್ತುತ ಆದೇಶದಲ್ಲಿ ಜೂನ್ 15ರಿಂದ ಜಾರಿಯಲ್ಲಿರುವ ಕ್ವಾರಂಟೈನ್ ಮಾರ್ಗಸೂಚಿಯನ್ನು ಈ ಮುಂದಿನಂತೆ ಪರಿಷ್ಕರಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.