ಬೆಂಗಳೂರು, ಜೂ. 28 (DaijiworldNews/MB) : ದಕ್ಷಿಣ ಕನ್ನಡ, ಉಡುಪಿ, ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ 9 ಜಿಲ್ಲೆಗಳಲ್ಲಿ ಜೂನ್ 29ರಿಂದ ಜುಲೈ 1ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಜುಲೈ 1ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹಾಗೆಯೇ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.