ನವದೆಹಲಿ, ಜೂ 28(DaijiworldNews/PY) : ರಾಷ್ಟ್ರದ ರಕ್ಷಣೆ ಮತ್ತು ಸುರಕ್ಷತೆಯ ಬಗ್ಗೆ ಯಾವಾಗ ಮಾತನಾಡುತ್ತಾರೆ ಎಂದು ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಷ್ಟ್ರದ ರಕ್ಷಣೆ ಹಾಗೂ ಸುರಕ್ಷತೆ ಬಗ್ಗೆ ಯಾವಾಗ ಮಾತನಾಡುತ್ತಾರೆ ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಇನ್ನೂ ಈ ವಿಚಾರವಾಗಿ ಕಾಂಗ್ರೆಸ್ನ ಮುಖ್ಯ ವಕ್ತಾರ ರಣದೀಪ್ ಸುರ್ಜಿವಾಲಾ ಅವರು ಕೂಡಾ ಟ್ವೀಟ್ ಮಾಡಿದ್ದು, ನೇಪಾಳವು ಈಗ ಮೊದಲ ಬಾರಿಗೆ ಗಡಿಯಲ್ಲಿ ಸೇನೆಯನ್ನು ನಿಯೋಜಿಸಿದೆ. ಮೋದಿ ಇರುವಾಗ ಯಾವುದೂ ಅಸಾಧ್ಯವಲ್ಲ ಎಂದು ಬರೆದಿದ್ದಾರೆ.
ರಾಹುಲ್ ಗಾಂಧಿ ಅವರು ಲಡಾಖ್ನ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಚೀನಾದೊಂದಿಗೆ ನಡೆದ ವಿವಾದಗಳ ವಿಚಾರವಾಗಿ ಪ್ರಧಾನಿ ಮೋದಿ ಅವರ ಬಳಿ ಕೆಲವು ಪ್ರಶ್ನೆಗಳನ್ನು ಕೇಳಿದ್ದು, ಇದೀಗ ಅದೇ ಪ್ರಶ್ನೆಗೆ ಪ್ರಧಾನಿ ಮೋದಿ ಅವರಿಂದ ಉತ್ತರ ಕೇಳುತ್ತಿದ್ದಾರೆ.