ಅನಂತನಾಗ್, ಜೂ. 29 (DaijiworldNews/MB) : ಸೋಮವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಖುಲ್ಚೋಹರ್ ಪ್ರದೇಶದಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ.
ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಉಗ್ರರು ಗುಂಡು ಹಾರಿಸಿದ್ದು ಭದ್ರತಾ ಪಡೆ ಹಾಗೂ ಉಗ್ರರ ನಡುವ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಾಗೆಯೇ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.