ಕೋಲಾರ, ಜೂ 29 (Daijiworld News/MSP): ಜಿಲ್ಲೆಯ ನಿರ್ಗಮಿತ ಜಿಲ್ಲಾ ಪಂಚಾಯತ್ ಸಿಇಓ ಹಾಲಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಬೆಳ್ಳಿಗದೆ, ಕಿರೀಟ ಹಾಗೂ ಚಿನ್ನದ ಉಂಗುರ ನೀಡಿ ಬೀಳ್ಕೊಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಗದೀಶ್ ಸೇರಿದಂತೆ ತಾಪಂ ಇಒ ಮತ್ತು 9 ಮಂದಿ ಗ್ರಾಪಂ ಪಿಡಿಒಗಳ ಮೇಲೆ ಎಫ್ಐಆರ್ ದಾಖಲಾಗಿದೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2019, ಆಗಸ್ಟ್ 23 ರಂದು ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಲಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ 1988ರ ಅನ್ವಯ ತನಿಖೆ ನಡೆಸಿ ವರದಿ ನೀಡುವಂತೆ ಕೋಲಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶ ನೀಡಿದೆ
ಘಟನೆಗೆ ಸಂಬಂಧಪಟ್ಟಂತೆ ಕೋಲಾರದ ಎಸ್.ನಾರಾಯಣಸ್ವಾಮಿ ಎಂಬವರು ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರು. ಅಕ್ರಮ ಸಂಭಾವನೆ ಮೂಲಕ ನಿರ್ಗಮಿತ ಅಧಿಕಾರಿಗೆ ಬೀಳ್ಕೊಡುಗೆ ನಡೆಸಲಾಗಿದೆ ಎಂದು ಆರೋಪಿಸಿದ್ದರು.