ಹೈದರಾಬಾದ್, ಜೂ 30 (Daijiworld News/MSP): ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ದಿಪಡಿಸಿದ ’ಕೊವಾಕ್ಸಿನ್ ' ಎಂಬ ದೇಶದ ಮೊದಲ ಲಸಿಕೆಯ ಮೊದಲ ಹಾಗೂ ಎರಡನೇ ಹಂತದ ಮಾನವ ಪ್ರಯೋಗಕ್ಕೆ "ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ" ( ಡಿಸಿಜಿಐ) ಗ್ರೀನ್ ಸಿಗ್ನಲ್ ನೀಡಿದೆ.
ಇದು ನಿಷ್ಕ್ರಿಯ ಲಸಿಕೆಯಾಗಿದ್ದು ಇದಕ್ಕೆ ಕೊವಾಕ್ಸಿನ್ ಎಂದು ಹೆಸರಿಸಲಾಗಿದೆ . ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯೊಂದಿಗೆ ಅಭಿವೃದ್ಧಿಪಡಿಸಿದ ಕೋವಾಕ್ಸಿನ್ನ ಹಂತ I ಮತ್ತು II ಕ್ಲಿನಿಕಲ್ ಪ್ರಯೋಗವನ್ನು ನಡೆಸಲು ಕಂಪನಿಯ ಅರ್ಜಿಯನ್ನು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮೋದಿಸಿದೆ ಎಂದು ಕಂಪನಿ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಕಾರದಿಂದ ಗ್ರೀನ್ ಸಿಗ್ನಲ್ ಪಡೆದ ಭಾರತದ ಮೊದಲ ದೇಶೀಯ ಔಷಧಿಯಾಗಿದೆ.
ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಾರ್ಸ್-ಕೋವ್-2 ನ ಒತ್ತಡವನ್ನು ಪ್ರತ್ಯೇಕಿಸಿ ವರ್ಗಾವಣೆ ಮಾಡಿದ ನಂತರ ಇದನ್ನು ಅಭಿವೃದ್ಧಿಪಡಿಸಿ ಭಾರತ್ ಬಯೋಟೆಕ್ ಕಂಪನಿಗೆ ವರ್ಗಾಯಿಸಿದೆ. ಇದಕ್ಕೂ ಮುಂಚೆ ಈ ಸಂಸ್ಥೆ ಪೋಲಿಯೋ, ರೇಬಿಸ್, ರೊಟಾ ವೈರಸ್, ಚಿಕಾನ್ ಗುನ್ಯಾ,ಜಪಾನೀಸ್ ಎನ್ಸೆಫಾಲಿಟಿಸ್ ಮತ್ತು ಜಿಂಕಾ ವಿರುದ್ಧದ ಕಾಯಿಲೆಗಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ
ಐಸಿಎಂಆರ್ ಮತ್ತು ಎನ್ಐವಿ ಸಹಯೋಗದೊಂದಿಗೆ ಕೊರೋನಾ ವಿರುದ್ಧ ಹೋರಾಡಲು ಪ್ರಮುಖ ಲಸಿಕೆಗಾಗಿ ಮಾನವ ಕ್ಲಿನಿಕಲ್ ಪ್ರಯೋಗಗಳು ಜುಲೈನಲ್ಲಿ ದೇಶಾದ್ಯಂತ ಪ್ರಾರಂಭವಾಗಲಿದೆ.