ನವದೆಹಲಿ, ಜೂ 30(DaijiworldNews/PY) : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೇಶದಲ್ಲಿ ಕೊರೊನಾ ವ್ಯಾಪಿಸಿದ ನಂತರ ಇದು ಪ್ರಧಾನಿ ಮೋದಿ ಅವರ ಆರನೇ ಭಾಷಣವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸೋಮವಾರ ರಾತ್ರಿ ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.
ಕೇಂದ್ರವು 59 ಚೀನೀ ಅಪ್ಲಿಕೇಶನ್ಗಳನ್ನು ನಿಷೇಧಿಸಿದ ಕೆಲವೇ ನಿಮಿಷಗಳಲ್ಲಿ ಹಾಗೂ ಅನ್ಲಾಕ್ 2.0ಗಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಜೂನ್ 15ರಂದು ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರ ಮಧ್ಯೆ ನಡೆದ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದು ಹಾಗೂ ಜುಲೈ 1ರಿಂದ ಅನ್ಲಾಕ್ 2.0ಗೆ ನಿರ್ಧಾರ ಕೈಗೊಳ್ಳುವ ನಡುವೆ ನಡೆಯಲಿರುವ ಈ ಭಾಷಣ ಪ್ರಮುಖವಾಗಿದೆ.