ಬೆಂಗಳೂರು, ಜೂ 30(DaijiworldNews/PY): ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ನೆರವಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದಿದ್ದಾರೆ.