ನವದೆಹಲಿ, ಜು 01(DaijiworldNews/PY): ದೇಶದಲ್ಲಿ ಇಲ್ಲಿಯವರೆಗೆ 5,66,840 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸೋಂಕಿಗೆ 16,893 ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಇನ್ನು ದೇಶದಲ್ಲಿ ಕೊರೊನಾ ಸೋಂಕು ಏರಿಕೆಯ ನಡುವೆ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯು ಕೂಡಾ ಏರಿಕೆಯಾಗುತ್ತಲ್ಲಿದ್ದು, 3,34,821 ಜನರು ಸೋಂಕಿನಿಂದ ಗುಣಮುಖರಾಗಿದ್ದು ಒಟ್ಟು 2,15,125 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಿನದಿಂದ ದಿನಕ್ಕೆ ಅಧಿಕ ಪ್ರಮಾಣದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಮಹಾರಾಷ್ಟ್ರದಲ್ಲಿ 1,69,883 ಜನರಿಗೆ ಸೋಂಕು ದೃಢಪಟ್ಟಿದ್ದು 7, 610 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 86,575 ಮಂದಿ ಗುಣಮುಖರಾಗಿದ್ದು 73, 313 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿರುವ ರಾಜ್ಯ ಮಹಾರಾಷ್ಟ್ರವಾಗಿದೆ.
ತಮಿಳುನಾಡಿನಲ್ಲಿ ಇಲ್ಲಿಯವರೆಗೆ 86,224 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 1,141 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ 85,161, ಗುಜರಾತ್ನಲ್ಲಿ 31,938, ಉತ್ತರ ಪ್ರದೇಶದಲ್ಲಿ 22,828, ಪಶ್ಚಿಮ ಬಂಗಾಳದಲ್ಲಿ 17,907, ರಾಜಸ್ತಾನದಲ್ಲಿ 17,660, ತೆಲಂಗಾಣದಲ್ಲಿ 15,394 ಕೊರೊನಾ ಪ್ರಕರಣಗಳು ದಾಖಲಾಗಿದೆ.