ಬೆಂಗಳೂರು, ಜು. 01 (DaijiworldNews/MB) : ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತನ್ನ ವಿವಾದಾತ್ಮಹ ಹೇಳಿಕೆ ಮೂಲಕವೇ ಸುದ್ದಿಯಲ್ಲಿದ್ದ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ತನ್ನ ಬೆಂಬಲಿಗರು, ಅಭಿಮಾನಿಗಳಿಂದ ಪಾದ ಪೂಜೆ ಮಾಡಿಸಿಕೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಹಾಗೆಯೇ ಈ ವಿಡಿಯೋ ವೈರಲ್ ಆಗಿದೆ.
ಈ ವಿಡಿಯೋದಲ್ಲಿ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಬೆಂಬಲಿಗರು ಅವರ ಕಾಲು ತೊಳೆದು, ಹೂ ಹಾಕಿ ಪಾದಪೂಜೆ ಮಾಡಿದ ಬಳಿಕ ಬಟ್ಟೆಯಿಂದ ಒರೆಸಿರುವುದು ಕಂಡು ಬಂದಿದ್ದು ಯಾರೂ ಕೂಡಾ ಸಾಮಾಜಿಕ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ.
ಇನ್ನು ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ಉಚಿತವಾಗಿ ಶಾಸಕ ಜಮೀರ್ ಅವರು ಮಾಡುತ್ತಿರುವ ಕಾರಣದಿಂದ ಜೂನ್ 28ರಂದು ಬಂಗಾರದ ಮನುಷ್ಯ ಜಮೀರಣ್ಣ ಅಭಿಮಾನಿಗಳ ಬಳಗದಿಂದ ನಡೆದ ಕಾರ್ಯಕ್ರಮದಲ್ಲಿ ಈ ಪಾದಪೂಜೆ ಮಾಡಲಾಗಿದೆ ಎಂದು ವರದಿಯಾಗಿದೆ.