ನವದೆಹಲಿ, ಜು 01(DaijiworldNews/PY): ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿಯಾಗಿ ಹಿರಿಯ ಐಎಫ್ಎಸ್ ಅಧಿಕಾರಿ ಇಂದ್ರಮಣಿ ಪಾಂಡೆ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ.
ಹಿರಿಯ ಐಎಫ್ಎಸ್ ಅಧಿಕಾರಿ ಇಂದ್ರಮಣಿ ಪಾಂಡೆ ಅವರನ್ನು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಕ ಮಾಡಿರುವ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಆದೇಶ ಹೊರಡಿಸಿದೆ.
ಇಂದ್ರಮಣಿ ಪಾಂಡೆ ಅವರು, 1990ರ ಸಾಲಿನ ಐಎಫ್ಎಸ್ ಅಧಿಕಾರಿಯಾಗಿದ್ದು, 2015ರಲ್ಲಿ ಓಮನ್ನಲ್ಲಿ ಭಾರತೀಯ ರಾಯಭಾರಿಯಾಗಿದ್ದರು. ಅಲ್ಲದೇ, ಇವರು ಪ್ಯಾರಿಸ್ನಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಅಧಿಕಾರಿಯಾಗಿ ಕೂಡಾ ಸೇವೆಸಲ್ಲಿಸಿದ್ದಾರೆ.