ಬೆಂಗಳೂರು, ಜು. 02 (DaijiworldNews/MB) : ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಜುಲೈ 2 ಮತ್ತು 3ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷನೆ ಮಾಡಿದೆ.
ರಾಜ್ಯದ ಕರಾವಳಿ ಹಾಗೂ ಪಶ್ಚಿಮ ಘಟ್ಟಗಳಲ್ಲಿಯೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ಧಾರವಾಡ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರ್ಗಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಇನ್ನು ಕರಾವಳಿಯಲ್ಲಿ ಗಾಳಿ ತೀವ್ರವಾಗಿರುವ ಕಾರಣದಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ.