ಬೆಂಗಳೂರು, ಜು. 02 (DaijiworldNews/MB) : ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಸಂಬಂಧಿಸಿ ಕೆಲವೆಡೆ ವಿರೋಧಗಳು ವ್ಯಕ್ತವಾಗುತ್ತಿದ್ದು ಏತನ್ಮಧ್ಯೆ ''ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯ ಸಂಸ್ಕಾರವನ್ನು ಗ್ರಾಮದಿಂದ ಹೊರಗೆ ಕನಿಷ್ಠ 2 ಎಕರೆ ಜಮೀನು ಗುರುತಿಸುವಂತೆ ಶೀಘ್ರದಲ್ಲೇ ಆದೇಶ ಮಾಡಲಾಗುವುದು'' ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಈ ಬಗ್ಗೆ ಮಾತನಾಡಿದ ಅವರು, ''ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿದೆ. ದೂರುಗಳು ಕೂಡಾ ಬರುತ್ತಿದೆ. ನಗರದಲ್ಲಿ ಅಂತ್ಯ ಸಂಸ್ಕಾರ ಮಾಡಿದಾಗ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಬಳಕೆ ಮಾಡಿ ಪೇಪರ್ನ ಕಣಗಳು ಗಾಳಿ ಮೂಲಕ ಸುತ್ತಮುತ್ತ ಮನೆಗಳಿಗೂ ತಲುಪುತ್ತಿದೆ ಎಂದು ದೂರು ಬಂದಿದೆ. ಈ ನಿಟ್ಟಿನಲ್ಲಿ ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಪ್ರತೇಕವಾದ ಜಾಗವನ್ನು ಗುರುತು ಮಾಡಲು ಜಿಲ್ಲಾಡಳಿತಕ್ಕೆ ಶೀಘ್ರದಲ್ಲೇ ಸೂಚನೆ ನೀಡಲಾಗುವುದು'' ಎಂದು ಹೇಳಿದ್ದಾರೆ.
ಹಾಗೆಯೇ ಈ ಸಂದರ್ಭದಲ್ಲಿ ''ಸಾರ್ವಜನಿಕವಾಗಿ ಪಿಪಿಇ ಕಿಟ್ ಎಸೆಯುವವರ ವಿರುದ್ಧವು ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು'' ಎಂದು ತಿಳಿಸಿದ್ದಾರೆ.