ಚೆನ್ನೈ, ಜು. 02 (DaijiworldNews/MB) : ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ವೈದ್ಯರ ಅಂತ್ಯ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ 20 ಮಂದಿಯನ್ನು ಬಂಧನ ಮಾಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ವೈದ್ಯರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು ಅಂತ್ಯಕ್ರಿಯೆಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ ಆರೋಗ್ಯ ಅಧಿಕಾರಿಗಳು ಇದ್ದ ಆಂಬುಲೆನ್ಸ್ ಮೇಲೆ ದಾಳಿಯನ್ನೂ ನಡೆಸಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು 20 ಮಂದಿಯನ್ನು ಬಂಧನ ಮಾಡಿದ್ದಾರೆ.
ದೇಶದ ಹಲವು ಕಡೆಗಳಲ್ಲಿ ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ಮೃತ ಸೋಂಕಿತರ ಅಂತ್ಯ ಸಂಸ್ಕಾರಕ್ಕಾಗಿ ಆರೋಗ್ಯಧಿಕಾರಿಗಳು ಅಲೆದಾಡಿರುವಂತಹ ಘಟನೆಗಳು ನಡೆದಿದೆ.