ನವದೆಹಲಿ, ಜು 02(DaijiworldNews/PY): ದೇಶಾದ್ಯಂತ ಒಂದೇ ದಿನದಲ್ಲಿ ಸುಮಾರು 19,148 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 434 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ.
ದೇಶದಲ್ಲಿ ಇಲ್ಲಿಯವರೆಗೆ 6,04,641 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸೋಂಕಿಗೆ 17,834 ಸಾವನ್ನಪ್ಪಿದ್ದಾರೆ.
ಇನ್ನು ದೇಶದಲ್ಲಿ ಕೊರೊನಾ ಸೋಂಕು ಏರಿಕೆಯ ನಡುವೆ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯು ಕೂಡಾ ಏರಿಕೆಯಾಗುತ್ತಲ್ಲಿದ್ದು, 3,59,860 ಜನರು ಸೋಂಕಿನಿಂದ ಗುಣಮುಖರಾಗಿದ್ದು ಒಟ್ಟು 2,26,947 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕದಲ್ಲಿ 16,514 ಮಂದಿಗೆ ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ 1,80,298 ಜನರಿಗೆ ಸೋಂಕು ದೃಢಪಟ್ಟಿದ್ದು 8,053 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 93,154 ಮಂದಿ ಗುಣಮುಖರಾಗಿದ್ದು 79,091 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ತಮಿಳುನಾಡಿನಲ್ಲಿ ಇಲ್ಲಿಯವರೆಗೆ 94,049 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 1,264 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ 89,802, ಗುಜರಾತ್ನಲ್ಲಿ 33,232, ಉತ್ತರ ಪ್ರದೇಶದಲ್ಲಿ 24,056, ಪಶ್ಚಿಮ ಬಂಗಾಳದಲ್ಲಿ 19,170, ರಾಜಸ್ತಾನದಲ್ಲಿ 18,312, ತೆಲಂಗಾಣದಲ್ಲಿ17,357 ಕೊರೊನಾ ಪ್ರಕರಣಗಳು ದಾಖಲಾಗಿದೆ.