ಬೆಂಗಳೂರು, ಜು 02(DaijiworldNews/PY): ಪಕ್ಷವು ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಂಡ ಕಾರಣ ಲೋಕಸಭಾ ಚುನಾವಣೆಯಲ್ಲಿ ಸೋಲಾಯಿತು ಎಂದು ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಸೋಲು ಕಾಣಲು ಜೆಡಿಎಸ್ನೊಂದಿಗೆ ಮಾಡಿಕೊಂಡ ಮೈತ್ರಿಯೇ ಕಾರಣ. ಪಕ್ಷವು ಇನ್ನು ಮುಂದೆ ಯಾವುದೇ ಮೈತ್ರಿ ಮಾಡಿಕೊಳ್ಳದೇ ಒಗ್ಗಟ್ಟಿನಿಂದ ಮುಂದೆ ಸಾಗುತ್ತದೆ ಎಂದು ತಿಳಿಸಿದರು.
ಡಿ.ಕೆ.ಶಿವಕುಮಾರ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರಿಗೆ ಪಕ್ಷವನ್ನು ಒಗ್ಗಟ್ಟಿನಿಂದ ಮುಂದೆ ಸಾಗಿಸುವ ಸಾಮರ್ಥ್ಯವಿದೆ. ಪಕ್ಷಕ್ಕೆ ಉತ್ತಮವಾದ ದಿನಗಳು ಮುಂದೆ ಬರುವುದು ಖಚಿತ ಎಂದರು.