ತುಮಕೂರು, ಜು 02(DaijiworldNews/PY): ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಿ ಬಳಿಕ ಹಿರಿಯ ಪ್ರಾಥಮಿಕ ಶಾಲೆಗಳನ್ನು ಆರಂಭ ಮಾಡಬೇಕು ಎಂದುಕೊಂಡಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ನಗರದ ವಿವಿಧ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ ಆರಂಭದ ಬಗ್ಗೆ ಆಗಸ್ಟ್ ಬಳಿಕ ನಿರ್ಧಾರ ಮಾಡುತ್ತೇವೆ. ಪೋಷಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸೂಕ್ತವಾದ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.
ಎಸ್ಎಸ್ಎಲ್ಸಿ ಪರೀಕ್ಷಾ ಹಾಜರಾತಿಯನ್ನು ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ. 98ರಷ್ಟಿದೆ. ವಿದ್ಯಾರ್ಥಿಗಳು ಕೊರೊನಾದ ನಡುವೆಯೂ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯೊಂದಿಗೆ ಸಾರಿಗೆ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳು ಕೈಜೋಡಿಸಿವೆ. ಇದರಿಂದಾಗಿ ಪರೀಕ್ಷೆ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.