ವಯನಾಡು, ಜು. 02 (DaijiworldNews/MB) : ಕೊರೊನಾ ವೈರಸ್ ಕಾರಣದಿಂದ ಕೇರಳದಲ್ಲಿ ಆನ್ಲೈನ್ ಶಿಕ್ಷಣವನ್ನು ಆರಂಭ ಮಾಡಲಾಗಿದ್ದು ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಯನಾಡು ಜಿಲ್ಲೆಯ ಕಲ್ಪೆಟ್ಟ ಪಟ್ಟಣದ ಬುಡಕಟ್ಟು ವಿದ್ಯಾರ್ಥಿಗಳಿಗೆ 175 ಸ್ಮಾರ್ಟ್ ಟಿವಿಗಳನ್ನು ನೀಡಿದ್ದಾರೆ.
ಕೊರೊನಾ ವೈರಸ್ ಕಾರಣದಿಂದ ಹಲವು ರಾಜ್ಯಗಳಲ್ಲಿ ಆನ್ಲೈನ್ ತರಗತಿಯನ್ನು ಆರಂಭ ಮಾಡಲಾಗಿದ್ದು ಕೇರಳದಲ್ಲಿ ಫಸ್ಟ್ ಬೆಲ್ ಆನ್ಲೈನ್ ತರಗತಿಗಳನ್ನು ನಡೆಸುತ್ತಿದ್ದು ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳು ಈ ಶಿಕ್ಷಣದಿಂದ ವಂಚಿತರಾಗಬಾರದು ಎಂದು ವಯನಾಡು ಸಂಸದರಾಗಿರುವ ರಾಹುಲ್ ಗಾಂಧಿ ಬುಡಕಟ್ಟು ವಿದ್ಯಾರ್ಥಿಗಳಿಗೆ 175 ಸ್ಮಾರ್ಟ್ ಟಿವಿಗಳನ್ನು ಒದಗಿಸಿದ್ದಾರೆ.
ಇನ್ನು ರಾಹುಲ್ ಗಾಂಧಿಯವರು ಈ ಹಿಂದೆಯೂ ತನ್ನ ಹುಟ್ಟು ಹಬ್ಬದ ದಿನವಾದ ಜೂನ್ 19 ರಂದು ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ವೀಕ್ಷಣೆಗೆ 50 ಟಿವಿಗಳನ್ನು ವಯನಾಡು ಜಿಲ್ಲಾಡಳಿತಕ್ಕೆ ಕಳುಹಿಸಿಕೊಟ್ಟಿದ್ದರು.