ಬೆಂಗಳೂರು, ಜು. 02 (DaijiworldNews/MB) : ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಜು.7 ರಿಂದ 30ರವರೆಗೆ 23 ದಿನಗಳ ಸುಮಾರು 427 ವರ್ಚ್ಯುವಲ್ ರ್ಯಾಲಿ ನಡೆಸಲು ಬಿಜೆಪಿ ನಿರ್ಧರಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರು, ರಾಜ್ಯದಲ್ಲಿ ಪಕ್ಷದ ವಿವಿಧ ಮೋರ್ಚಾಗಳ ವತಿಯಿಂದ ಒಟ್ಟು 427 ವರ್ಚುವಲ್ ರ್ಯಾಲಿಗಳು ನಡೆಯಲಿದೆ. ಇದರಲ್ಲಿ ಸುಮಾರು 5.13 ಲಕ್ಷ ಜನ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಈ ರ್ಯಾಲಿಯಲ್ಲಿ ದಿಕ್ಸೂಚಿ ಭಾಷಣವನ್ನು ರಾಜ್ಯ ಉಸ್ತುವಾರಿಯೂ ಆಗಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರರಾವ್ ಮಾಡಲಿದ್ದು ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪಾಲ್ಗೊಳಲಿದ್ದಾರೆ. ಅಧ್ಯಕ್ಷತೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಹಿಸಲಿದ್ದಾರೆ.