ಹುಬ್ಬಳ್ಳಿ, ಜು 02(DaijiworldNews/PY): ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ಡೌನ್ ಪರಿಹಾರವಲ್ಲ. ಯಾವುದೇ ಕಾರಣಕ್ಕೂ ಮತ್ತೊಮ್ಮೆ ಲಾಕ್ಡೌನ್ ಘೋಷಣೆ ಮಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಜನರನ್ನು ಮಾನಸಿಕವಾಗಿ ಸಿದ್ದಗೊಳಿಸುವ ಸಲುವಾಗಿ ಲಾಕ್ಡೌನ್ ಜಾರಿ ಮಾಡಿದ್ದು. ಹಾಗಾಗಿ ದೇಶದ ಆರ್ಥಿಕತೆಯನನ್ನು ಬಂದ್ ಮಾಡಿ ವ್ಯವಹಾರ ಮಾಡಲು ಸಾಧ್ಯವಿಲ್ಲ. ಕೇವಲ ಪಾಸಿಟಿವ್ ಬಂದ ಪ್ರದೇಶಗಳನ್ನು ಮಾತ್ರ ಸೀಲ್ಡೌನ್ ಮಾಡುತ್ತೇವೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರವು ದೇಶದ ಭದ್ರತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಒಂದಿಂಚು ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಎಲ್ಲದಕ್ಕೂ ಭಾರತ ಸೈನ್ಯ ಸನ್ನದ್ದವಾಗಿದೆ ಎಂದರು.