ಭದ್ರಾವತಿ, ಜು 02(DaijiworldNews/PY): ಎಂಪಿಎಂ ಕಾರ್ಖಾನೆಯನ್ನು ಪುನರಾರಂಭಿಸುವ ಸಲುವಾಗಿ ಎಲ್ಲಾ ಪ್ರಯತ್ನಗಳು ನಡೆದಿದ್ದು, ಇದರೊಂದಿಗೆ ನೌಕರರ ಸಮಸ್ಯೆಯನ್ನು ಪರಿಹರಿಸಲು ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕಾರ್ಖಾನೆಯ ಅಧೀನದಲ್ಲೇ ಅರಣ್ಯದ ಭೂಮಿಯನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡುವಂತೆ ಹೇಳಲಾಗಿದೆ ಎಂದು ತಿಳಿಸಿದ್ದಾರೆ.
ಈ ಪ್ರದೇಶದ ಜನರು ಹಾಗೂ ಕಾರ್ಮಿಕರು ಕಾರ್ಖಾನೆ ಉಳಿದರೆ ಅವರ ಬದುಕಿಗೆ ನೆರವಾಗುತ್ತದೆ. ಸಿಎಂ ಬಿಎಸ್ವೈ ಅವರು ಕಾರ್ಖಾನೆಯನ್ನು ಆರ್ಥಿಕವಾಗಿ ಅಭಿವೃದ್ದಿಗೊಳಿಸಲು ಆಸಕ್ತಿ ತೋರಿದ್ದಾರೆ ಎಂದರು.