ಲಡಾಖ್, ಜು. 03 (DaijiworldNews/MB) : ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಹಾಗೂ ಭಾರತೀಯ ಸೇನೆ ನಡುವೆ ಘರ್ಷಣೆ ನಡೆದು ಭಾರತೀಯ ಯೋಧರು ಹುತಾತ್ಮರಾದ ಬಳಿಕ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಡಾಖ್ಗೆ ಭೇಟಿ ನೀಡಿ ಯೋಧರೊಂದಿಗೆ ಮಾತುಕತೆ ನಡೆಸಿದ್ದಾರೆ.
ಇಂದು ಮುಂಜಾನೆ ಪ್ರಧಾನಿಯವರು ಲಡಾಖ್ನ ಲೆಹ್ ಜಿಲ್ಲೆಯ ನಿಮೂಗೆ ಭೇಟಿ ನೀಡಿದ್ದು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಭಾರತೀಯ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರಾವಣೆಯವರು ಕೂಡಾ ಜೊತೆಗಿದ್ದು ಗಡಿಯ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಹಾಗೆಯೇ ಪ್ರಸ್ತುತ ಭಾರತೀಯ ಸೇನಾಪಡೆ, ವಾಯುಪಡೆ ಹಾಗೂ ಐಟಿಬಿಪಿ ಯೋಧರೊಂದಿಗೂ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಭಾರತ ಹಾಗೂ ಚೀನಾದ ನಡುವೆ ಜೂ.15ರಂದು ಘರ್ಷಣೆ ನಡೆದಿದ್ದು 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಬಳಿಕ ಉಭಯ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿದೆ.