ಅಯೋಧ್ಯೆ, ಜು 04 (DaijiworldNews/PY): ಶ್ರೀರಾಮ ದೇಗುಲ ನಿರ್ಮಾಣ ಕಾಮಗಾರಿಯು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ಆಗಮಿಸಿ ಶಂಕುಸ್ಥಾಪನೆ ನೆರವೇರಿಸಿದ ನಂತರವೇ ಪ್ರಾರಂಭ ಮಾಡಲಾಗುವುದು ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮಹಾಂತಾ ನೃತ್ಯ ಗೋಪಾಲ್ ದಾಸ್ ಹೇಳಿದ್ದಾರೆ.
ಈಗಾಗಲೇ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಅಯೋಧ್ಯೆಗೆ ಆಗಮಿಸಿ ಶಂಕುಸ್ಥಾಪನೆ ನೆರವೇರಿಸುವಂತೆ ತಿಳಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆಗಾಗಿ ಎದುರುನೋಡುತ್ತಿದ್ದೇವೆ ಎಂದಿದ್ದಾರೆ.
ಜು 18ರಂದು ದೇಗುಲದ ನಿರ್ಮಾಣ ಕಾರ್ಯಕ್ಕೆ ಸಂಬಂಧಪಟ್ಟಂತೆ ಟ್ರಸ್ಟ್ನ ಸದಸ್ಯರು ಸಭೆ ಮಾಡಲಿದ್ದೇವೆ. ಅಯೋಧ್ಯೆಗೆ ಪ್ರಧಾನಿ ನರೇಂಧ್ರ ಮೋದಿ ಅವರು ಆಗಮಿಸಿದರೆ, ನಾವು ಮುಂಜಾಗ್ರತಾ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಕಳೆದ ವರ್ಷ ನವೆಂಬರ್ 9ರಂದು ನೀಡಿದ್ದ ತೀರ್ಪಿನಲ್ಲಿ, ರಾಮಮಂದಿರಕ್ಕೆ ಸಂಬಂಧಪಟ್ಟಂತೆ ಟ್ರಸ್ಟ್ವೊಂದನ್ನು ರಚಿಸುವಂತೆ ತಿಳಿಸಿತ್ತು. ಈ ಹಿನ್ನಲೆ ಶ್ರೀರಾಮಚಂದ್ರನ ಮೂರ್ತಿಯನ್ನು ತಾತ್ಕಾಲಿಕವಾಗಿ ಮಾನಸ ಭವನಕ್ಕೆ ಸ್ಥಳಾಂತರ ಮಾಡಿ, ದೇಗುಲ ನಿರ್ಮಾಣ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ.