ನವದೆಹಲಿ, ಜು. 05 (DaijiworldNews/MB) : ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ವೇಗಗತಿಯಲ್ಲಿ ಏರಿಕೆಯಾಗುತ್ತಿದ್ದು ಕಳೆದ ಒಂದು ದಿನದಲ್ಲಿ 24,850 ಸೋಂಕು ಪ್ರಕರಣಗಳು ದೃಢಪಟ್ಟಿದೆ. 613 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು 6,73,165 ಕೊರೊನಾ ಪ್ರಕರಣಗಳು ದಾಖಲಾಗಿದ್ದು ಒಟ್ಟು 19268 ಸಾವನ್ನಪ್ಪಿದ್ದಾರೆ.
ಇನ್ನು ಕೊರೊನಾ ಪ್ರಕರಣಗಳ ಏರಿಕೆಯ ನಡುವೆಯೂ ಸೋಂಕಿನಿಂದ ಗುಣಮುಖರಾಗುತ್ತಿರುವ ಸಂಖ್ಯೆಯು ಏರಿಕೆಯಾಗುತ್ತಿದ್ದು ಈವರೆಗೆ 4,09,083 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 2,44,814 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಗೆಯೇ ಜುಲೈ 4ರ ವರೆಗೂ ದೇಶದಲ್ಲಿ 97,89,066 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.
ದೇಶದಲ್ಲೇ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿ ಸೋಂಕಿನಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ 200064 ಕೊರೊನಾ ಪ್ರಕರಣಗಳು ದಾಖಲಾಗಿದ್ದು 108082 ಮಂದಿ ಗುಣಮುಖರಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. 8671 ಕೊರೊನಾಗೆ ಬಲಿಯಾದರೆ 83311 ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಳಿದಂತೆ ತಮಿಳುನಾಡಿನಲ್ಲಿ 107001, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 97200, ಗುಜರಾತ್ನಲ್ಲಿ 35312 ಪ್ರಕರಣಗಳು ದಾಖಲಾಗಿದೆ.